Ticker

6/recent/ticker-posts

Ad Code

Responsive Advertisement

*ಧೀಮಂತ ರಾಜಕಾರಣಿ ಎಸ್​.ಎಂ. ಕೃಷ್ಣ ..


ಮಾಜಿ ಮುಖ್ಯಮಂತ್ರಿ ಎಸ್.‌ ಎಂ ಕೃಷ್ಣ (92) ಅವರು ಮಂಗಳವಾರ ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎಸ್​.ಎಂ. ಕೃಷ್ಣ ಅವರು ಕರ್ನಾಟಕದ ಅತ್ಯಂತ ಪ್ರಭಾವಿ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬಳಿಕ ರಾಜಕೀಯ ತಿರುವುಗಳಿಂದಾಗಿ  ಬಿಜೆಪಿ ಸೇರ್ಪಡೆಗೊಂಡರು.
ಎಸ್​.ಎಂ. ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 1932 ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿ  ಅವರು ಜನಿಸಿದ್ದರು.
ಎಸ್​.ಎಂ. ಕೃಷ್ಣ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕದ 16 ನೇ ಸಿಎಂ ಆಗಿದ್ದರು. ಬಳಿಕ 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯದ ಮಾಜಿ ರಾಜ್ಯಪಾಲರಾಗಿ ಮತ್ತು ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.
ಬೆಂಗಳೂರನ್ನು ಐಟಿ-ಬಿಟಿ ಹಬ್​ ಆಗಿ ಮಾಡಲು ಇವರು ಪ್ರಮುಖ ಪಾತ್ರವಹಿಸಿದ್ದರು. ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಇತರ ಅನೇಕ ನಾಗರಿಕ ಸ್ನೇಹಿ ಉಪಕ್ರಮಗಳೊಂದಿಗೆ ವಿದ್ಯುತ್ ಸುಧಾರಣೆಗಳನ್ನು ರಚಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಅಷ್ಟೇ ಅಲ್ಲದೆ ಡಾ. ರಾಜ್​ ಕುಮಾರ ಅವರನ್ನು ವೀರಪ್ಪನ್‌ನಿಂದ ಬಿಡಿಸಿಕೊಂಡು ಬರುವಲ್ಲಿ ಕೂಡ ಎಸ್​ಎಂ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದರು.

Post a Comment

0 Comments