Ticker

6/recent/ticker-posts

Ad Code

Responsive Advertisement

*ಪದಗ್ರಹಣದ ಬೆನ್ನಲ್ಲೇ ದೊಡ್ಡ ನಿರ್ಧಾರ ತೆಗೆದುಕೊಂಡ ಫಡ್ನವಿಸ್ ಸರ್ಕಾರ*

 ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ‘ಲಾಡ್ಲಿ ಬೆಹನಾ ಯೋಜನೆ’ಯನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ.ರಾಜ್ಯದ ಆರ್ಥಿಕ ಪರಿಸ್ಥಿತಿಗಳನ್ನು ಪರಿಗಣಿಸಿ ಇದರ ಮೊತ್ತವನ್ನು 1500 ರೂ. ನಿಂದ 2100 ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಮಹಾರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಅಲ್ಲದೇ ಇನ್ನು ಮುಂದೆ ಕೂಡ ಮಹಾರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಮಹಾರಾಷ್ಟ್ರದ ಒಳಿತಿಗಾಗಿ ನಾವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ ಕಾರ್ಯಗಳನ್ನು ಪೂರ್ಣಗೊಳಿಸಲು ಬಯಸುತ್ತೇವೆ ಎಂದರು.

Post a Comment

0 Comments