Ticker

6/recent/ticker-posts

Ad Code

Responsive Advertisement

*ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ‌ ತನುಷ್ಕಾ


 ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧ ವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್‌ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲು ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಮಂಗಳೂರು ಮೂಲದ ಫ್ಲೆಯಿಂಗ್‌ ಆಫೀಸರ್‌ ತನುಷ್ಕಾ ಸಿಂಗ್‌ ಅವರಿಗೆ‌ ಅಂಥಹ ಅವಕಾಶ ಸಿಕ್ಕಿದೆ. ಇವರು ಜಾಗ್ವಾರ್‌ ಯುದ್ಧ ವಿಮಾನ ಸ್ಕ್ವಾಡ್ರನ್‌ನಲ್ಲಿ ಪೈಲಟ್‌ ಆಗಿ ಆಯ್ಕೆಯಾಗಿದ್ದಾರೆ
ಜಾಗ್ವಾರ್‌ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉ.ಪ್ರದೇಶದವರಾದರೂ 2007ರಿಂದ ತನುಷ್ಕಾ ಮಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಹಾಗಾಗಿ “ನಾನು ಕುಡ್ಲದವಳು’ ಎಂದು ಹೆಮ್ಮೆಯಿಂದ ಹೇಳುತ್ತಾರೆ.
ತಂದೆ ನಿವೃತ್ತ ಲೆಫ್ಟಿನೆಂಟ್‌ ಕರ್ನಲ್‌ ಅಜಯ್‌ ಪ್ರತಾಪ್‌ ಸಿಂಗ್‌ ಅವರು ಪ್ರಸ್ತುತ ಎಂಆರ್‌ಪಿಎಲ್‌ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್‌ ಮ್ಯಾನೇಜರ್‌ ಆಗಿದ್ದಾರೆ.
ತನುಷ್ಕಾ ಅವರು ಸುರತ್ಕಲ್‌ ಡಿಪಿಎಸ್‌ ಎಂಆರ್‌ಪಿಎಲ್‌ ಶಾಲೆ ಯಲ್ಲಿ ಎಸೆಸೆಲ್ಸಿ, ಮಂಗಳೂರಿನ ಶಾರದಾ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ಶಿಕ್ಷಣದ ಬಳಿಕ ಮಣಿಪಾಲ ಎಂಐಟಿಯಲ್ಲಿ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿ ನಿಯ ರಿಂಗ್‌ನಲ್ಲಿ 2022ರಲ್ಲಿ ಬಿ.ಟೆಕ್‌. ಪದವಿ ಗಳಿಸಿದ್ದಾರೆ.
ತನುಷ್ಕಾ ಸಿಂಗ್‌ ಅವರು ಶಾರ್ಟ್‌ ಸರ್ವಿಸ್‌ ಕಮಿಷನ್‌ ಮೂಲಕ ಭಾರತೀಯ ಸೇನೆಯನ್ನು ಸೇರಲು ಬಯ ಸಿದ್ದರು. ಆದರೆ ಅಲ್ಲಿ ಮಹಿಳೆಯರಿಗೆ ಹುದ್ದೆಯ ಅವಕಾಶ ಕಡಿಮೆ ಇತ್ತು, ಹಾಗಾಗಿ ವಾಯುಪಡೆ ಯನ್ನು ಆಯ್ಕೆ ಮಾಡಿಕೊಂಡರು. ಆಯ್ಕೆಯ ಬಳಿಕ ಒಂದೂವರೆ ವರ್ಷ ಕಾಲ ವಾಯುಪಡೆಯ ಕೆಡೆಟ್‌ ಆಗಿ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ವಾಯುಪಡೆ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪಡೆದರು. ಅಲ್ಲಿ ಕಮಿಷನ್‌x ಅಧಿಕಾರಿಯಾಗಿ ಭಡ್ತಿ ಪಡೆದು ಒಂದು ವರ್ಷ ಕಾಲ ಯುದ್ಧ ವಿಮಾನಗಳ ಪೈಲಟ್‌ ಆಗಿ ತರಬೇತಿ ಪಡೆದಿದ್ದಾರೆ. ಈ ವೇಳೆ ಅವರು ಹಾಕ್‌ ಎಂಕೆ 132 ವಿಮಾನವನ್ನು ಚಲಾಯಿಸಿದ್ದಾರೆ.

Post a Comment

0 Comments