ಬೆಂಗಳೂರು: ವಿಧಾನಸೌಧದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಹಾಗೂ ಅವುಗಳ ಸುರಕ್ಷತೆಯ ನಿಟ್ಟಿನಲ್ಲಿ ಶಕ್ತಿ ಸೌಧದ ಆವರಣದಲ್ಲೇ ಆಶ್ರಯ ವ್ಯವಸ್ಥೆಯನ್ನು ಕಲ್ಪಿಸಲು ಸಚಿವಾಲಯ ಮುಂದಾಗಿದೆ.
ವಿಧಾನಸೌಧದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಲು ಖುದ್ದು ಸ್ವೀಕರ್ ಯುಟಿ ಖಾದರ್ ಅವರೇ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ವಿಧಾನಸೌಧದಲ್ಲೇ ಶ್ವಾನಗಳಿಗೆ ಶೆಲ್ಟರ್ ನಿರ್ಮಿಸಲು ತೀರ್ಮಾನಿಸಲಾಗಿದೆ.
ಅಂದಹಾಗೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಗೆ ಆಗಮಿಸಿದ್ದ ವೇಳೆ ಶ್ವಾನಗಳನ್ನ ಹಿಡಿಯಲು ಸರ್ಕಾರ ಸರ್ಕಸ್ ನಡೆಸಿತ್ತು. ಆಗ ಏನೂ ವರ್ಕೌಟ್ ಆಗಿಲ್ಲ. ಇಷ್ಟಾದರೂ ವಿಧಾನಸೌಧದ ಆವರಣ, ವಿಕಾಸಸೌಧ ಹಾಗೂ ಉದ್ಯಾನವನದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
0 Comments