*ಕಾರವಾರ:* ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ಗುಡ್ಡ ಕುಸಿತ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 2024ರ ಜುಲೈ 16 ರಂದು ಧಾರಾಕಾರವಾಗಿ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ 11 ಜನ ಮೃತಪಟ್ಟಿದ್ದರು. ಹೆದ್ದಾರಿ ಪಕ್ಕದಲ್ಲೇ ಲಕ್ಷ್ಮಣ್ ನಾಯ್ಕ ಎಂಬುವರು ಹೋಟೆಲ್ ನಡೆಸುತ್ತಿದ್ದರು. ಗುಡ್ಡ ಕುಸಿದು ಮಣ್ಣು ಹೋಟೆಲ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮಣ್ ನಾಯ್ಕ ಮತ್ತು ಆತನ ಪತ್ನಿ ಹಾಗೂ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರು.ಈ ಘಟನೆಯಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬದವರು ಪ್ರೀತಿಯಿಂದ ಸಾಕಿದ್ದ ಶ್ವಾನ ಅನಾಥವಾಗಿತ್ತು. ಕಾರ್ಯಚರಣೆ ನಡೆಯುವ ಪ್ರತಿದಿನ ಅವಘಡ ಸಂಭವಿಸಿದ್ದ ಸ್ಥಳಕ್ಕೆ ಬಂದು ಮಾಲೀಕನ ಬರುವಿಕೆಗಾಗಿ ಶ್ವಾನ ಕಾಯುತ್ತಾ ಕುಳಿತಿದ್ದು, ಸಾಕಷ್ಟು ಗಮನ ಸೆಳೆದಿತ್ತು. ಇದನ್ನು, ಗಮನಿಸಿದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ಶ್ವಾನವನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಿ ಸಾಕುತ್ತಿದ್ದಾರೆ. ಈ ಶ್ವಾನಕ್ಕೆ ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ತರಬೇತಿ ನೀಡಿಲಾಗಿದ್ದು, ರವಿವಾರ (ಮಾ.09) ಪೊಲೀಸ್ ಇಲಾಖೆಯಿಂದ ನಡೆದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾದ ಮುಕ್ತ ಕರ್ನಾಟಕ ಜಾಗೃತಿ ಮೂಡಿಸುವ ಮ್ಯಾರಾಥಾನ್ನಲ್ಲಿ 5 ಕಿಮೀ ಓಡಿ ಪದಕವನ್ನ ಪಡೆದಿದೆ. ಶ್ವಾನಕ್ಕೆ ಸ್ವತಃ ಎಸ್ಪಿ ಎಂ ನಾರಾಯಣ್ ತರಬೇತಿಯನ್ನು ನೀಡಿದ್ದು, ಬೇರೆ ಪೊಲೀಸ್ ಶ್ವಾನಗಳಂತೆ ಈ ಶ್ವಾನ ಸಹ ಸಾಕಷ್ಟು ಚುರುಕಿನಿಂದ ಕೆಲಸ ಮಾಡುತ್ತಿದೆ. ಹೀಗಾಗಿ, ಇದು, ಎಸ್ಪಿ ಎಂ. ನಾರಾಯಣ್ ಅವರ ನೆಚ್ಚಿನ ಶ್ವಾನ
ಯೋಗೇಶ್ ಶಿರೂರು
0 Comments