Ticker

6/recent/ticker-posts

Ad Code

Responsive Advertisement

*ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್*******


*ಮಂಗಳೂರು:* ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ  ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ  ಮುಂದೆ ದಿಗಂತ್​ ಹೇಳಿದ್ದಾರೆ. ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ದಿಗಂತ್​ ಹೇಳಿದ್ದಾರೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್​ ಬರೊಬ್ಬರಿ 10 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ದಿಗಂತ್​ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.ನಾಪತ್ತೆಯಾದ ದಿನ ಮನೆ ಬಳಿ ರೈಲ್ವೆ ಟ್ರ್ಯಾಕ್​ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾರೆ. ಬಳಿಕ, ಅಪರಿಚಿತರ ಬೈಕ್​ಏರಿ ಮಂಗಳೂರಿಗೆ ಹೋಗಿದ್ದಾರೆ. ಮಂಗಳೂರಿನಿಂದ ಬಸ್​ ಶಿವಮೊಗ್ಗ ತಲುಪಿ, ಬಳಿಕ ಶಿವಮೊಗ್ಗದಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಟ್ರೈನ್​ ಹತ್ತಿ ಬೆಂಗಳೂರಿಗೆ ಹೋಗಿದ್ದಾರೆ. ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್​ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3000 ಸಂಪಾದನೆ ಮಾಡಿದ್ದಾರೆ. ನಂತರ ವಿವಿಧ ಕಡೆ ಸುತ್ತಾಟ ನಡೆಸಿ, ಶನಿವಾರ (ಮಾ.08) ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್​ ಹತ್ತಿ ಉಡುಪಿಗೆ ತುಲುಪಿದ್ದಾರೆ.

Post a Comment

0 Comments