Ticker

6/recent/ticker-posts

Ad Code

Responsive Advertisement

*ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!******


*ಬೆಂಗಳೂರು:* ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.
ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ ಅಥವಾ ಪ್ರದೇಶ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಸ್ಥಿತಿ ಸುಧಾರಣೆಗೆ ಶ್ರಮಿಸುತ್ತಿದ್ದಾರೆ. ಇದರ ಜೊತೆಗೆ ಆರೋಗ್ಯ ಸಿಬ್ಬಂದಿಗಳ ಗೌರವ ಧನವೂ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ. ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನ 1500 ರೂಪಾಯಿಗೆ‌ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.  
     ಯೋಗೇಶ್ ಶಿರೂರು

Post a Comment

0 Comments