Ticker

6/recent/ticker-posts

Ad Code

Responsive Advertisement

*ಪುರುಷರಲ್ಲಿ ಹೆಚ್ಚಾಗುತ್ತಿದೆ ಪ್ರಾಸ್ಟೇಟ್ ಕ್ಯಾನ್ಸರ್, ಏನಿದರ ಲಕ್ಷಣಗಳು? ತಡೆಯುವುದು ಹೇಗೆ?***********


ಶತ್ರುವಂತೆ ಕಾಡುವ ಕ್ಯಾನ್ಸರ್ ಹೆಸರು ಕೇಳಿದರೆ ಸಾಕು, ಈ ಮಾರಾಣಾಂತಿಕ ಕಾಯಿಲೆ ಯಾರಿಗೂ ಬರದಿರಲಿ ಎಂದು ಬೇಡುವವರೇ ಹೆಚ್ಚು. ನೀವು ಈ ಪ್ರಾಸ್ಟೇಟ್ ಕ್ಯಾನ್ಸರ್ (Prostate Cancer) ಹೆಸರನ್ನು ಕೇಳಿರಬಹುದು. ಹೌದು, ಪುರುಷರಲ್ಲಿ ಮಾರಣಾಂತಿಕ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ಹೆಚ್ಚಾಗುತ್ತಿದೆ. 50 ವರ್ಷ ಮೇಲ್ಪಟ್ಟವರಲ್ಲಿ ಈ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಇದೀಗ ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ (Joe Biden) ಅವರು ಪ್ರಾಸ್ಟೇಟ್ ಕ್ಯಾನ್ಸರ್ ಗೆ ತುತ್ತಾಗಿದ್ದಾರೆ. ಪುರುಷರಲ್ಲಿ ಮೂತ್ರಕೋಶದ ಕೆಳಗೆ ಇರುವ ಪ್ರಾಸ್ಟೇಟ್ ಗ್ರಂಥಿಯಲ್ಲಿ ಕಂಡುಬರುವ ಮಾರಣಾಂತಿಕ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ನೀವು ತಿಳಿದುಕೊಳ್ಳುವುದು ಒಳ್ಳೆಯದು. ಪ್ರಾಸ್ಟೇಟ್ ಕ್ಯಾನ್ಸರ್ ಹೆಚ್ಚಾಗಿ ಪುರುಷರಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದೆ. ಪ್ರಾಸ್ಟೇಟ್ ಪುರುಷರ ಜನನೇಂದ್ರಿಯದ ಒಂದು ಗ್ರಂಥಿಯಾಗಿದ್ದು, ಮೂತ್ರಕೋಶದ ಕೆಳಗೆ ಇರುವ ಪ್ರಾಸ್ಟೇಟ್ ಗ್ರಂಥಿಯಲ್ಲಿ ಈ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ. ಈ ಗ್ರಂಥಿಯಲ್ಲಿ ಜೀವಕೋಶಗಳ ಅಸಹಜ ಬೆಳವಣಿಗೆಯೂ ಪ್ರಾಸ್ಟೇಟ್ ಕ್ಯಾನ್ಸರ್ ಆಗಿ ಮಾರ್ಪಡಾಗುತ್ತದೆ. ಪ್ರಾರಂಭದಲ್ಲೇ ಇದರ ರೋಗಲಕ್ಷಣಗಳನ್ನು ಗುರುತಿಸುವುದು ಕಷ್ಟಕರವಾಗಿದ್ದು, ಸರಿಯಾದ ಚಿಕಿತ್ಸೆ ನೀಡಿದರೆ ಈ ಕಾಯಿಲೆಯಿಂದ ಗುಣಮುಖವಾಗಬಹುದು.ಪ್ರಾಸ್ಟೇಟ್ ಕ್ಯಾನ್ಸರ್ ಕಾಣಿಸಿಕೊಂಡ ಪ್ರಾರಂಭದಲ್ಲಿ ಸರಿಯಾದ ಚಿಕಿತ್ಸೆ ಪಡೆದರೆ ಈ ಕಾಯಿಲೆಯನ್ನು ಗುಣಪಡಿಸಬಹುದು. ಪಿಎಸ್ಎ ರಕ್ತ ಪರೀಕ್ಷೆ, ಡಿಜಿಟಲ್ ಗುದನಾಳ ಪರೀಕ್ಷೆ ಸೇರಿದಂತೆ ಇನ್ನಿತರ ಪರೀಕ್ಷೆಯಿಂದ ಪ್ರಾಸ್ಟೇಟ್ ಕ್ಯಾನ್ಸರ್ ಇದೆಯೇ ಎಂದು ಪತ್ತೆ ಹಚ್ಚಬಹುದು. ಈ ಕ್ಯಾನ್ಸರ್ ಕಾಣಿಸಿಕೊಂಡ ವ್ಯಕ್ತಿಗೆ ರೇಡಿಯೋಥೆರಪಿ, ಶಸ್ತ್ರಚಿಕಿತ್ಸೆ, ಆಂಡ್ರೊಜೆನ್ ನಿವಾರಣಾ ಚಿಕಿತ್ಸೆ ಸೇರಿದಂತೆ ಇನ್ನಿತ್ತರ ಚಿಕಿತ್ಸಾ ವಿಧಾನಗಳನ್ನು ವೈದ್ಯರು ಅನುಸರಿಸುತ್ತಾರೆ.

   Yogesh shiruru

Post a Comment

0 Comments