*ಬೆಂಗಳೂರು:* ಕರುನಾಡಿನ ಹೆಮ್ಮೆಯ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ “ಹಸೀನಾ ಮತ್ತು ಇತರೆ ಕತೆಗಳು” ಕೃತಿಯ ಇಂಗ್ಲಿಷ್ ಅನುವಾದ “ಹಾರ್ಟ್ ಲ್ಯಾಂಪ್” ಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಇದು ನಿಜಕ್ಕೂ ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಸಾಮಾಜಿಕ ಕಾರ್ಯಕರ್ತೆ, ವಕೀಲೆಯಾಗಿರುವ ಇವರು ಸಾಹಿತ್ಯ ಕ್ಷೇತ್ರಕ್ಕೆ ಬಂದಿದ್ದೇ ಅಚ್ಚರಿ ಹಾಗಾದರೆ, ಈ ಬಾನು ಮುಷ್ತಾಕ್ ಯಾರು? ಮೂಲತಃ ಹಾಸನದವರೇ ಆದ ಬಾನು ಮುಷ್ತಾಕ್ ಬೆಳೆದದ್ದು ಹಾಸನದಲ್ಲಿಯೇ. ಅರಸೀಕೆರೆಯಲ್ಲಿ ಶಾಲೆಗೆ ಸೇರಿದ ಬಾನುಗೆ ಉರ್ದು ಮಾತ್ರ ತಲೆಗೆ ಹೋಗಲಿಲ್ಲ. ಹೀಗಾಗಿ ಅವರ ಪೋಷಕರು ಕನ್ನಡವನ್ನಾದರೂ ಕಲಿಯಲಿ ಎಂದು ಆಕೆಯನ್ನು ಶಿವಮೊಗ್ಗದ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗೆ ಸೇರಿಸುತ್ತಾರೆ. ಬಳಿಕ ಪದವಿವರೆಗೂ ವ್ಯಾಸಂಗ ಮಾಡುತ್ತಾರೆ.ಮುಂದೆ ವೃತ್ತಿಯಲ್ಲಿ ವಕೀಲೆಯಾದ ಬಾನು ಮುಷ್ತಾಕ್ ಅವರು, ಮುಸ್ಮಿಂ ಮಹಿಳೆಯ ಪರವಾಗಿ ತಮ್ಮ ಧ್ವನಿ ಎತ್ತುತ್ತಾರೆ.ಆ ಸಾಕಷ್ಟು ಮುಸ್ಮಿಂ ಮಹಿಳೆ ಕೇಸ್ಗಳನ್ನು ವಾದಿಸುತ್ತಾರೆ. ಓರ್ವ ಮುಸ್ಮಿಂ ಯುವತಿ ಸಿನಿಮಾ ನೋಡಿದ್ದಕ್ಕೆ ಆಕೆಯ ವಿರುದ್ಧ ಫತ್ವಾ ಹೊರಡಿಸಲಾಗಿತ್ತು. ಇದನ್ನು ಖಂಡಿಸುವುದು ಮಾತ್ರವಲ್ಲದೇ ಲಂಕೇಶ್ ಪತ್ರಿಕೆಗೆ ಬರೆಯುವ ಮೂಲಕ ಮಾಧ್ಯಮ ಲೋಕಕ್ಕೂ ಪಾದಾರ್ಪಣೆ ಮಾಡುತ್ತಾರೆ. ಬಾನು ಮುಷ್ತಾಕ್ ಅವರು ಒಂದು ರೀತಿ ಬಹುಮುಖ ಪ್ರತಿಭೆ ಎಂದೇ ಹೇಳಬಹುದು. ಏಕೆಂದರೆ ಸಾಮಾಜಿಕ ಕಾರ್ಯಕರ್ತೆ, ಮಹಿಳಾಪರ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಪತ್ರಕರ್ತೆಯಾಗಿ ಗಮನ ಸೆಳೆದಿದ್ದಾರೆ. ಇಂತವರು ಮಾತ್ರ ಸಾಹಿತಿಗಳಾಗುವುದಕ್ಕೆ ಸಾಧ್ಯ ಎನ್ನುವ ಸಂದರ್ಭದಲ್ಲಿ ಅದೆಲ್ಲವನ್ನು ಮೀರಿ ಬಾನು ಮುಷ್ತಾಕ್ ಸಾಹಿತ್ಯ ಲೋಕಕ್ಕೆ ಎಂಟ್ರಿ ಕೊಡುತ್ತಾರೆ.
ಯೋಗೇಶ್ ಶಿರೂರು
0 Comments