Ticker

6/recent/ticker-posts

Ad Code

Responsive Advertisement

,*ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಹಾಗೂ ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್****


*ಬೆಂಗಳೂರು:* ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಹಾಗೂ ಬೆಂಗಳೂರಿನಲ್ಲಿ ಮೊದಲ ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಹೇಳಿದ್ದಾರೆ.
ಇಂದು ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ, ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದರು.
ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು. ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾ ಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದರು. ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.
            ಯೋಗೇಶ್ ಶಿರೂರು
        

Post a Comment

0 Comments