Ticker

6/recent/ticker-posts

Ad Code

Responsive Advertisement

*ಉತ್ತರ ಪ್ರದೇಶ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ ಪೂರ್ವಜರ ಭೂಮಿ ಹರಾಜು*


 *ಲಕ್ನೋ:* ಒಂದೆಡೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಇದೆ. ಇನ್ನೊಂದೆಡೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ‌ಪತ್‌ ಜಿಲ್ಲೆಯಲ್ಲಿ ಹೊಂದಿದ್ದ ಜಮೀನು ಹರಾಜಾಗಿದೆ. ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ದಾಳಿ ನಡೆಸಿ 26 ಅಮಾಯಕರ ಪ್ರಾಣ ತೆಗೆದಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್​ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ ನಾಶಪಡಿಸಿತ್ತು. ಅದಾದ ಮೇಲೆ ದಾಳಿ ಪ್ರತಿದಾಳಿಗಳು ನಡೆಯುತ್ತಲೇ ಇದ್ದವು. ಆದರೆ ಕೊನೆಯಲ್ಲಿ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಕದನ ವಿರಾಮ ಘೋಷಿಸಲಾಗಿದೆ. ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಪೂರ್ವಜರು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರೌತ್​ ಪಟ್ಟಣದಲ್ಲಿ ಹೊಂದಿರುವ ಆಸ್ತಿಯನ್ನು 1.38 ಕೋಟಿ ರೂ.ಗೆ ಹರಾಜು ಹಾಕಲಾಗಿದೆ. ಬರೌತ್‌ನ ಕೊಟಾನಾ ಗ್ರಾಮದಲ್ಲಿ ಇರುವ ಸುಮಾರು 13 ಬಿಘಾ ಭೂಮಿಯನ್ನು ಶತ್ರು ಆಸ್ತಿ ಎಂದು ಘೋಷಿಸಲಾಗಿದೆ. ಈಗ ಅದು 1.38 ಕೋಟಿ ರೂ.ಗೆ ಮಾರಾಟವಾಗಿದೆ. ಈ ಭೂಮಿ ಮೊದಲು ಪರ್ವೇಜ್ ಮುಷರಫ್ ಅವರ ಸಹೋದರ ಡಾ. ಜಾವೇದ್ ಮುಷರಫ್ ಮತ್ತು ಅವರ ಕುಟುಂಬದ ಹೆಸರಿನಲ್ಲಿತ್ತು ಆದರೆ 15 ವರ್ಷಗಳ ಹಿಂದೆ ಅದನ್ನು ಶತ್ರು ಆಸ್ತಿಯಾಗಿ ನೋಂದಾಯಿಸಲಾಗಿದೆ.

Post a Comment

0 Comments