*ನವದೆಹಲಿ:* ಹಾರ್ವರ್ಡ್ ವಿಶ್ವವಿದ್ಯಾಲಯದ ಮೇಲೆ ನಿರ್ಬಂಧಗಳನ್ನು ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ಯಾವುದೇ ಬೇರೆ ದೇಶಗಳ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ದಾಖಲಾತಿಗೆ ಅವಕಾಶ ನೀಡಬಾರದು ಎಂದು ಆದೇಶಿಸಿದ್ದರು. ಈಗಾಗಲೇ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಿಕೊಳ್ಳಬಹುದು, ಇಲ್ಲದಿದ್ದರೆ ಅವರ ಪದವಿಗೆ ಕಾನೂನು ಮಾನ್ಯತೆ ನೀಡುವುದಿಲ್ಲ. ಮುಂದಿನ ವರ್ಷದಿಂದ ವಿದೇಶಿ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಲಾಗಿದೆ ಎಂದು ಟ್ರಂಪ್ ಸರ್ಕಾರ ಘೋಷಿಸಿತ್ತು. ಇದು ಬೇರೆ ದೇಶಗಳ ವಿದ್ಯಾರ್ಥಿಗಳ ಉನ್ನತ ವ್ಯಾಸಂಗದ ಕನಸಿಗೆ ದೊಡ್ಡ ಪೆಟ್ಟು ಕೊಟ್ಟಿತ್ತು. ಆದರೆ, ಇದೀಗ ಹಾರ್ವರ್ಡ್ ವಿಶ್ವವಿದ್ಯಾಲಯ ಈ ಆದೇಶದ ವಿರುದ್ಧ ಮೊಕದ್ದಮೆ ದಾಖಲಿಸಿದೆ. ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿದ್ದಕ್ಕಾಗಿ ಹಾರ್ವರ್ಡ್ ಟ್ರಂಪ್ ಆಡಳಿತದ ಮೇಲೆ ಮೊಕದ್ದಮೆ ಹೂಡಿದೆ. ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದನ್ನು ನಿಷೇಧಿಸುವ ನಿರ್ಧಾರವನ್ನು ಪ್ರಶ್ನಿಸಿ ಹಾರ್ವರ್ಡ್ ವಿಶ್ವವಿದ್ಯಾಲಯವು ಟ್ರಂಪ್ ಆಡಳಿತದ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ.
0 Comments