*ಕಲಬುರಗಿ:* “ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತಿದೆ” ಎಂದು ಬಿಜೆಪಿ ನಾಯಕ ಎನ್.ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆಯನ್ನು ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರವಿಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ತಮ್ಮ ಅಜಾಗರೂಕ ಟೀಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬಿಜೆಪಿ MLC ರವಿಕುಮಾರ್ ಮೇ 24ರಂದು ಪ್ರಿಯಾಂಕ್ ಖರ್ಗೆ ವಿರುದ್ಧದ ಪ್ರತಿಭಟನೆ ವೇಳೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದಿದ್ದರು. ಇದಕ್ಕೆ ಇದೀಗ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮೂಲಕ ರವಿಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.
0 Comments