*ತೀರ್ಥಹಳ್ಳಿ:* ಕಾಂತಾರ ಚಾಪ್ಟರ್ 1 ಸಿನಿಮಾ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ ಇಬ್ಬರು ಕಲಾವಿದರು ಈ ಹಿಂದೆ ಮೃತಪಟ್ಟಿದ್ದರು. ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ಕಲಾವಿದ ಹೃದಯಾಘಾತದಿಂದ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು ಅವರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ ಕೆ ಎಂದು ಗುರುತಿಸಲಾಗಿದೆ.
ಅವರು ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲು ಆಗುಂಬೆ ಹೋಂ ಸ್ಟೇಯಲ್ಲಿ ಕಳೆದ ರಾತ್ರಿ ತಂಗಿದ್ದ ವೇಳೆ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಕೂಡಲೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ಚಿತ್ರೀಕರಣ ಆರಂಭವಾದ ನಂತರ ಇದು ಮೂರನೇ ಸಾವಾಗಿದೆ.
0 Comments