*ಬೆಂಗಳೂರು:* 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುತ್ತಿದ್ದು, ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices/ ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದಿದೆ. ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ ಎಂದು ತಿಳಿಸಿದೆ.
0 Comments