Ticker

6/recent/ticker-posts

Ad Code

Responsive Advertisement

*ವಿರಾಟ್ ಕೊಹ್ಲಿಗಾಗಿ ತರಾತುರಿ: ಸಿಐಡಿ ತನಿಖೆಯಲ್ಲಿ ಬಯಲಾಯ್ತು ಆರ್​ಸಿಬಿ ವಿಜಯೋತ್ಸವ ಕಾಲ್ತುಳಿತಕ್ಕೆ ಕಾರಣ!***


 *ಬೆಂಗಳೂರು* : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆಯಲ್ಲಿ ಕಂಡುಬಂದ ಎಲ್ಲಾ ಅಂಶಗಳನ್ನು ಸಿಐಡಿ ವರದಿಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗಾಗಿ  ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ.ಆರ್​ಸಿಬಿ ಗೆಲುವಿನ ಮರುದಿನವೇ ಕಾರ್ಯಕ್ರಮ ಆಯೋಜಿಸಲು ಆರ್​ಸಿಬಿ ಸಿಇಓ ರಾಜೇಶ್ ಮೆನನ್, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿ (ಕೆಎಸ್​​ಸಿಎ) ಮೇಲೆ ಒತ್ತಡ ಹೇರಿದ್ದರು. ಈ ಇಬ್ಬರು ವ್ಯಕ್ತಿಗಳಿಂದಾಗಿಯೇ‌ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು ಎಂಬ ಮಾಹಿತಿಯನ್ನು ಸಿಐಡಿ ಕಲೆಹಾಕಿದೆ.ಕಾರ್ಯಕ್ರಮ ತಡಮಾಡಿದರೆ ವಿರಾಟ್ ಕೊಹ್ಲಿ ಬರಲ್ಲ. ಹಾಗಾಗಿ ಜೂನ್ 4ರಂದೇ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೊಹ್ಲಿ ಆಪ್ತರೂ ಆಗಿರುವ ಸೋಸಲೆ ಕೆಎಸ್​​ಸಿಎಗೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಆರ್​​ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡುವಂತೆ ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಕೆಎಸ್​​ಸಿಎ ಸಲಹೆ ನೀಡಿದ್ದವು. ಆದರೆ, ಕಾರ್ಯಕ್ರಮ ಮುಂದೂಡಿದರೆ ಕೊಹ್ಲಿ ಬರಲ್ಲ. ಅವರು ಬ್ರಿಟನ್​​ಗೆ ಹೋಗಬೇಕು ಎಂದು ಸೋಸಲೆ ಒತ್ತಡ ಹೇರಿದ್ದರು.

Post a Comment

0 Comments